KSLU Logo


One moment ...
ಹಿಂದಿನ ಪುಟ

ಶ್ರೀ. ಈರನಗೌಡ ಬಿರಾದಾರ

ಶ್ರೀ. ಈರನಗೌಡ ಬಿರಾದಾರ, ಸಹಾಯಕ ಪ್ರಾಧ್ಯಾಪಕರು (ಇತಿಹಾಸ), ಇವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ 2010 ರಿಂದ ಪೂರ್ಣಕಾಲಿಕ ಸಹಾಯಕ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದಾರೆ. ಇವರು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಷಯದಲ್ಲಿ 2002ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಸ್ನಾತಕೋತ್ತರ ಪದವಿ ಹೊಂದಿರುತ್ತಾರೆ. ತಮ್ಮ ಪಿ.ಎಚ್.ಡಿ. ಮಹಾಪ್ರಭಂದವನ್ನು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡಕ್ಕೆ ಮಂಡಿಸಿದ್ದಾರೆ. ಇವರು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್)ನ್ನು 2005ರಲ್ಲಿ ಉತ್ತಿರ್ಣರಾಗಿದ್ದಾರೆ. ಇವರು 2003-04ರಲ್ಲಿ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಅಥಿತಿ ಉಪನ್ಯಾಸಕರಾಗಿ ಹಾಗೂ 2004-05ರಲ್ಲಿ ಕೆ.ಎಲ್.ಇ. ಸಂಸ್ಥೆಯ ಎಸ್.ಕೆ. ಕಲಾ ಮತ್ತು ಎಚ್.ಎಸ್.ಕೆ. ವಿಜ್ಞಾನ ಮಹಾವಿದ್ಯಾಲಯದಲ್ಲಿ ಪೂರ್ಣಕಾಲಿಕ ಉಪನ್ಯಾಸಕರಾಗಿ ಸೇವೆಸಲ್ಲಿಸಿದ್ದಾರೆ. ಸದರಿಯವರು ವಿವಿಧ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನಗಳಲ್ಲಿ ಭಾಗವಹಿಸಿ ಲೇಖನಗಳನ್ನು ಮಂಡಿಸಿರುತ್ತಾರೆ.
ಪ್ರಸ್ತುತ ವಿಶ್ವವಿದ್ಯಾಲಯದ ರ್‍ಯಾಗಿಂಗ ನಿಗ್ರಹ ವಿಭಾಗ ಮತ್ತು ಶಿಷ್ಯವೇತನ ವಿಭಾಗದ ಸಂಯೋಜಕರಾಗಿ ಹಾಗೂ ಕಾನೂನು ಶಾಲೆಯ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Back To Top